ಸುಳ್ಯ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜ.23 ರಂದು ಸುಳ್ಯ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಸಚಿವರ ಪ್ರವಾಸ ವಿವರ ಈ ರೀತಿ ಇದೆ. ಬೆಳಿಗ್ಗೆ 8.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಪೂ.10ಕ್ಕೆ ಸುಳ್ಯಕ್ಕೆ ಆಗಮಿಸುವರು. 10.30ಕ್ಕೆ ಬಾಳಿಲ
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಿದ್ಯಾರ್ಥಿ ನಿಲಯ /ಆಶ್ರಮ ಶಾಲೆ ಕಟ್ಟಡಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುವರು. 11 ಗಂಟೆಯಿಂದ 3 ಗಂಟೆಯ ತನಕ ಕೆ.ವಿ.ಜಿ.ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3.15ಕ್ಕೆ ಸುಳ್ಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಂವಾದ ನಡೆಸುವರು. 4 ಗಂಟೆಗೆ ಮಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














