ಸುಳ್ಯ:ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ.ಮುಸ್ತಫ ಅವರು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಡಾ.ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿದರು.ಸಂಪುಟ ವಿಸ್ತರಣೆಯಲ್ಲಿ ಹೆಚ್ಚುವರಿಯಾಗಿ ಮಹತ್ವದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ವಖ್ಫ್, ಹಜ್ ಖಾತೆಯನ್ನು ವಹಿಸಿಕೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ, ಮೀಫ್ ಶೈಕ್ಷಣಿಕ ಒಕ್ಕೂಟದ ಗೌರವಾಧ್ಯಕ್ಷ ಉಮ್ಮರ್ ಟಿ.ಕೆ. ಉಪಸ್ಥಿತರಿದ್ದರು







































