ಮಂಗಳೂರು:ಕರ್ನಾಟಕ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಯು.ಟಿ.ಖಾದರ್ ಅವರನ್ನು
ಭಾನುವಾರ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ನೂರಾರು ಮಂದಿ ಕಾರ್ಯಕರ್ತರು,ಮುಖಂಡರು ಸೇರಿ ಸ್ವಾಗತಿಸಿದರು. ಹೂಗುಚ್ಛ ನೀಡಿ, ಶಾಲು ಹೊದಿಸಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಇಂದು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಚಿವರು ಭಾಗವಹಿಸಿದರು.






