ಮಡಪ್ಪಾಡಿ: ಅಡಿಕೆ ಕೃಷಿಗೆ ಎಲೆ ಹಳದಿ ರೋಗ ಬಾಧಿಸಿ ಕೃಷಿ ನಾಶಗೊಂಡ ಕಾರಣ ಮನನೊಂದು ಆತ್ಮಹತ್ಯೆ ಮಾಡಿದ ಕೃಷಿಕ ಮಡಪ್ಪಾಡಿ ಬಲ್ಕಜೆ ಸೀತಾರಾಮ ಎಂಬವರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸರಕಾರದಿಂದ
5 ಲಕ್ಷ ಪರಿಹಾರ ಕೊಡಿಸುವುದಾಗಿ ತಿಳಿಸಿದ ಸಚಿವರು, ಮನೆ ದುರಸ್ತಿಯನ್ನು ಸರಕಾರದ ವತಿಯಿಂದ ಮಾಡಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ತಹಶೀಲ್ದಾರ್ ಮಂಜುನಾಥ್, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಮಡಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ ಉಷಾ ಜಯರಾಮ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾನ, ಪಿಡಿಓ ರವಿಚಂದ್ರ, ಮಡಪ್ಪಾಡಿ ಸೊಸೈಟಿ ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಕೆಪಿಸಿಸಿ ಮಾಜಿ ಸದಸ್ಯ ವೆಂಕಪ್ಪ ಗೌಡ, ಮಡಪ್ಪಾಡಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ಮತ್ತಿತರರಿದ್ದರು.