ಸುಳ್ಯ: ಅತಿ ವಿರಳ ಕಾಯಿಲೆ (HYPER IGE mediate Mast cell activation syndrome)ಯಿಂದ ಬಳಲಿ ಸುಳ್ಯ ಕೆ.ವಿ.ಜಿ.ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಂದಿನಿ ಜಿ.ಡಿ. ಅವರನ್ನು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಚಾಂದಿನಿ ಅವರು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸುಳ್ಯಕ್ಕೆ ಆಗಮಿಸಿದ
ಸಚಿವರು ಆಸ್ಪತ್ರೆಗೆ ಭೇಟಿ ನೀಡಿದರು.ಅತಿ ವಿರಳ ಕಾಯಿಲೆಯಿಂದ ಬಳಲುತ್ತಿದ್ದು ಲಕ್ಷಾಂತರ ರೂ ಖರ್ಚಾಗಿದೆ. ಚಿಕಿತ್ಸೆಗೆ ಸರಕಾರದಿಂದ ಹೆಚ್ಚಿನ ನೆರವು ಒದಗಿಸಬೇಕು ಎಂದು ಚಾಂದಿನಿ ಈ ಸಂದರ್ಭದಲ್ಲಿ ಸಚಿವರಿಗೆ ಮನವಿ ಸಲ್ಲಿಸಿದರು.ಸರಕಾರದಿಂದ ಈಗಾಗಲೇ ಚಿಕಿತ್ಸಾ ನೆರವು ಒದಗಿಸಲಾಗಿದೆ. ಇನ್ನಷ್ಟು ನೆರವು, ಹಾಗೂ ಚಿಕಿತ್ಸಾ ಸೌಲಭ್ಯ ಒದಗಿಸಲಾಗುವುದು ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಮುಖಂಡರಾದ ಟಿ.ಎಂ.ಶಹೀದ್ ತೆಕ್ಕಿಲ್, ಎಂ.ವೆಂಕಪ್ಪ ಗೌಡ, ಪಿ.ಎಸ್.ಗಂಗಾಧರ ಮತ್ತಿತರರು ಇದ್ದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ.ಲೀಲಾಧರ ಡಿ.ವಿ.ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.