ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜೂ.23ರ ಶುಕ್ರವಾರ ಸಂಜೆ ನಗರದ ದೇರೆಬೈಲ್ನ ಬ್ಲೂಬೇರಿ ಹಿಲ್ಸ್ ನಲ್ಲಿ ಪ್ರಸ್ತಾಪಿತ ಕಿನೋನಿಕ್ಸ್ ಐಟಿ ಪಾರ್ಕ್ ಭೇಟಿ ನೀಡಿ
ಸಂಬಂಧಿಸಿದವರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್,ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಯ)ಯ ಜಿಲ್ಲಾ ಅಧ್ಯಕ್ಷ ಪ್ರವೀಣ್ ಕಲ್ಬಾವಿ, ಗೌರವ್ ಹೆಗ್ಡೆ, ಸಾಫ್ಟ್ ವೇರ್ ಟೆಕ್ನಾಲಜಿ ಪಾಕ್೯ ಆಫ್ ಇಂಡಿಯಾದ ಜಂಟಿ ನಿರ್ದೇಶಕ ರವೀಂದ್ರ ಆರೋರಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.