ಬೆಂಗಳೂರು :ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸಚಿವರಿಗೆ ವಿವಿಧ ಇಲಾಖೆಗಳ ಜವಾಬ್ದಾರಿಗಳನ್ನು ವಹಿಸಲಾಗಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಣಕಾಸು ಮತ್ತು ಇತರೆ ವಿವಿಧ
ಖಾತೆಗಳ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ಕಂದಾಯ ಇಲಾಖೆ, ಯುವ ಸಬಲಿಕರಣ ಇಲಾಖೆ ಖಾತೆಗಳನ್ನು ನೀಡಲಾಗಿದೆ.
ಪ್ರಿಯಾಂಕ್ ಖರ್ಗೆ – ಗೃಹ ಇಲಾಖೆ ಮತ್ತು ಐಟಿ ಬಿಟಿ ಇಲಾಖೆ, ಕೆ.ಜೆ.ಜಾರ್ಜ್ – ಇಂಧನ ಮತ್ತು ಪ್ರವಾಸೋಧ್ಯಮ ಇಲಾಖೆ, ಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
ಸತೀಶ್ ಜಾರಕಿಹೊಳಿ – ಲೋಕಪಯೋಗಿ ಇಲಾಖೆ, ಕೃಷ್ಣ ಬೈರೇಗೌಡ – ಬೆಂಗಳೂರು ನಗರಾಭಿವೃದ್ಧಿ, ರಾಮಲಿಂಗಾರೆಡ್ಡಿ – ಜಲಸಂಪನ್ಮೂಲ ಇಲಾಖೆ, ಕೆ.ಎಚ್.ಮುನಿಯಪ್ಪ – ಆಹಾರ ಖಾತೆ, ಯು.ಟಿ.ಖಾದರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ,
ಈಶ್ವರ ಖಂಡ್ರೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್,
ಡಾ.ಯತೀಂದ್ರ ಸಿದ್ದರಾಮಯ್ಯ- ನಗರಾಭಿವೃದ್ಧಿ,
ಭೈರತಿ ಸುರೇಶ್- ಸಾರಿಗೆ, ಶರಣಪ್ರಕಾಶ್ ಪಾಟೀಲ್- ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಖಾತೆ ನೀಡಲಾಗಿದೆ.













