ಮಂಗಳೂರು:ಆ.29 ರಂದು ಕಂದಾಯ ಸಚಿವ ಕೃಷ್ಣ ಬೈರೇ ಗೌಡ , ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್ ಹೊರಟ್ಟಿ, ಶಾಲಾ ಶಿಕ್ಷಣ-ಸಾಕ್ಷರತಾ ಸಚಿವ ಮಧು ಬಂಗಾರಪ್ಪ ದ.ಕ.ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಆ.29ರ ಮಂಗಳವಾರ ಬೆಳಗ್ಗೆ 10 ರಿಂದ 12.30ರ ವರೆಗೆ ಜಿಲ್ಲೆಯ ವಿವಿಧ ಕಚೇರಿಗಳಿಗೆ ಭೇಟಿ ಮತ್ತು ಪರಿಶೀಲನೆ ನಡೆಸುವರು. 12.30 ರಿಂದ 1 ಗಂಟೆಯ ವರೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ
ಕಚೇರಿಗೆ ಭೇಟಿ ನೀಡುವರು. ನಂತರ 2 ಗಂಟೆಯಿಂದ ಸಂಜೆ 6.30 ರ ವರೆಗೆ ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 9.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು
ರಾಜ್ಯ ವಿಧಾನ ಪರಿಷತ್ನ ಸಭಾಪತಿಯಾದ ಬಸವರಾಜ ಎಸ್ ಹೊರಟ್ಟಿ
ಅವರು ಆ.29ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮೂಡಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ ಕನ್ನಡ ಭವನದಲ್ಲಿ ನಡೆವ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಭಾಗವಹಿಸುವರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ
ಅವರು ಆ.29ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮೂಡಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ ಕನ್ನಡ ಭವನದಲ್ಲಿ ನಡೆವ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.