ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತ ಆಯೋಗ ನೂತನ ಅಧ್ಯಕ್ಷರಾಗಿ ನೇಮಕಗೊಂಡ ನಿಸಾರ್ ಅಹ್ಮದ್ ಅವರನ್ನು ಸುಳ್ಯದ ಪ್ರಮುಖ ಕಾಂಗ್ರೆಸ್ ನಾಯಕರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಕರ್ನಾಟಕ ಸರಕಾರದಿಂದ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿ ಇತ್ತೀಚೆಗೆ ನೇಮಕಗೊಂಡು ಅಧಿಕಾರ ಸ್ವೀಕರಿಸಿದ
ನಿವೃತ್ತ ಐ. ಪಿ. ಎಸ್ ಅಧಿಕಾರಿ ನಿಸಾರ್ ಅಹ್ಮದ್ ರವರನ್ನು ಬೆಂಗಳೂರಿನ ಕೆಎಂಡಿಸಿ ಭವನ ದಲ್ಲಿ ಭೇಟಿಯಾದ ಸುಳ್ಯದ ಪ್ರಮುಖ ನಾಯಕರಾದ ನಿಸಾರ್ ಅಹ್ಮದ್ ರವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಿಸಾರ್ ಅಹ್ಮದ್ ರವರು ದ. ಕ. ಜಿಲ್ಲೆಗೆ ಶೀಘ್ರದಲ್ಲೇ ಭೇಟಿ ನೀಡುವುದಾಗಿ ಹೇಳಿದರು
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ತೆಕ್ಕಿಲ್, ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಅರೆಭಾಷೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ, ಸದಾನಂದ ಮಾವಜಿ,ಡಿಸಿಸಿ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಬೋಳ್ಳೂರು, ಸುಳ್ಯ ನಗರ ಪಂಚಾಯತ್ ಸದಸ್ಯರುಗಳಾದ ಶರೀಫ್ ಕಂಠಿ, ಸಿದ್ದೀಕ್ ಕೋಕ್ಕೊ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಮೊದಲಾದವರು ಉಪಸ್ಥಿತರಿದ್ದರು