ಸುಳ್ಯ: ತೊಡಿಕಾನದಲ್ಲಿ ನಡೆದ ಅನೈತಿಕ ಪೋಲಿಸ್ ಗಿರಿಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಘಟಕದ ಅದ್ಯಕ್ಷರಾದ ಇಸ್ಮಾಯಿಲ್ ಪಡ್ಪಿನಂಗಡಿ ಹೇಳಿದ್ದಾರೆ. ಪೋಲೀಸರು ಈ ಬಗ್ಗೆ ಕೈಗೊಂಡ ಶೀಘ್ರ ಕ್ರಮವನ್ನು ಸ್ವಾಗತಿಸುತ್ತೇವೆ.ಇಂತಹ ಕೃತ್ಯ ಎಸಗುವವರ ವಿರುದ್ದ ಕಠಿಣ ಕ್ರಮ ಕೈಗೊಂಡು ಮುಂದೆ ಇಂತಹ ಇಂತಹ ಘಟನೆ ಪುನರಾವರ್ತನೆ ಅಗದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.