ಮಂಗಳೂರು; ವಸತಿ, ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್ ಅವರು ಸೆ.5 ಹಾಗೂ 6ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ವಿವರ ಇಂತಿದೆ: ಅವರು ಸೆ.5ರ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ನಗರದಲ್ಲಿ ಹಾಜಿ ಯೇನನಪ್ಪಯ್ಯ ಅಬ್ದುಲ್ಲಾ ಕುಂಞಿ ಅವರು ಆಯೋಜಿಸಿರುವ ಅಲ್ಪಸಂಖ್ಯಾತರ ಸಮುದಾಯದ ಮುಖಂಡರೊಡನೆ ಚರ್ಚೆ ನಡೆಸುವರು. ನಂತರ ನಗರದ ಟೌನ್ ಹಾಲ್ನಲ್ಲಿ
ಸಾರ್ವಜನಿಕರಿಂದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ಪುತ್ತೂರಿನ ತಾಲೂಕಿನ ಮಿತ್ತೂರು ಇಡ್ಕಿದು ಗ್ರಾಮದ ದಾರುಲ್ ಇರ್ಷಾದ್ ಆವರಣದಲ್ಲಿ ಪ್ರಧಾನ ಮಂತ್ರಿ ಜನ ವಿಕಾಸ ಯೋಜನೆಯಡಿ ಶಾಲಾ ಕಟ್ಟಡದ ಉದ್ಘಾಟನೆಯಲ್ಲಿ ಭಾಗವಹಿಸುವರು. ಅಲ್ಲಿಂದ ಮಧ್ಯಾಹ್ನ 1.30ಕ್ಕೆ ಪುತ್ತೂರು ತಾಲೂಕಿನ ಮಾಣಿಗೆ ತೆರಳುವರು. ನಂತರ 2.30ಕ್ಕೆ ಮಂಗಳೂರಿಗೆ ಆಗಮಿಸುವರು. ಮಧ್ಯಾಹ್ನ 3.30ಕ್ಕೆ ನಗರದ ಹಜ್ ಭವನದ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು ಹಾಗೂ ಅಲ್ಪಸಂಖ್ಯಾತರ ಮುಖಂಡರೊಡನೆ ಚರ್ಚೆ ನಡೆಸುವರು. ಅಲ್ಲಿಂದ ಸಂಜೆ 6 ಗಂಟೆಗೆ ಉಳ್ಳಾಲದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಯ ಶಂಕು ಸ್ಥಾಪನೆ ನೆರವೇರಿಸುವರು. 7 ಗಂಟೆಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡುವರು. ನಂತರ ರಾತ್ರಿ 8 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ನಲ್ಲಿ ವಾಸ್ತವ್ಯ ಮಾಡುವರು.
ಸೆ.6ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಕಣಚೂರು ಮೆಡಿಕಲ್ ಕಾಲೇಜ್ ಕ್ಯಾಂಪಸ್ ನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮದ ಉದ್ಘಾಟನೆ ಮಾಡುವರು. ನಂತರ ಮಧ್ಯಾಹ್ನ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ಸಂಜೆ 4.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.