ಮಂಗಳೂರು: ಕೆಪಿಸಿಸಿ ನಿರ್ದೇಶನದಂತೆ ದ. ಕ. ಮತ್ತು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ಸಮಾವೇಶ ಮಂಗಳೂರು ಪುರಭವನದಲ್ಲಿ ಜರಗಿತು. ಈ ಸಮಾರಂಭ ದಲ್ಲಿ ರಾಜ್ಯಸಭಾ ವಿಪಕ್ಷ ಮುಖ್ಯ ಸಚೇತಕ, ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಡಾ. ನಾಸಿರ್ ಹುಸೈನ್ ಮತ್ತು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ, ವಿಧಾನಪರಿಷತ್ ಶಾಸಕರಾದ
ಸಲೀಂ ಅಹ್ಮದ್ ಅವರನ್ನು ಸನ್ಮಾನಿಸಲಾಯಿತು
ಸಭಾಧ್ಯಕ್ಷತೆಯನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ವಹಿಸಿದ್ದರು. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಸಮಾವೇಶದಲ್ಲಿ ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ರಾಜ್ಯ ಸಂಘಟನಾ ಕಾರ್ಯದರ್ಶಿ ನಝಿರ್ ಮಠ, ರಾಜ್ಯ ಕಾರ್ಯದರ್ಶಿ ಹಬೀಬುಲ್ಲಾ ಕಣ್ಣೂರ್, ಮೊದಲಾವರು ಸನ್ಮಾನ ನೆರವೇರಿಸಿದರು
ಈ ಸಂದರ್ಭದಲ್ಲಿ ಮಾಜಿ ಸಚಿವರುಗಳಾದ ಬಿ. ರಮಾನಾಥ ರೈ, ವಿನಯಕುಮಾರ್ ಸೊರಕೆ ಕೆಪಿಸಿಸಿ ಮಾಧ್ಯಮ ವಕ್ತಾರ ಟಿ. ಎಂ. ಶಹೀದ್ ತೆಕ್ಕಿಲ್, ಕೆಪಿಸಿಸಿ ಸಂಯೋಜಕ ಎಸ್. ಸಂಶುದ್ದೀನ್ ಮೊದಲಾವರು ಉಪಸ್ಥಿತರಿದ್ದರು.ಈ ಸಮಾರಂಭದಲ್ಲಿ ಸುಳ್ಯದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ವಿಧಾನಸಭಾ ಅಭ್ಯರ್ಥಿ ಜಿ. ಕೃಷ್ಣಪ್ಪನಗರಪಂಚಾಯತ್ ಸದಸ್ಯ ಶರೀಫ್ ಕಂಠಿ, ಸುಳ್ಯ ಬ್ಲಾಕ್ ಅಲ್ಪ ಸಂಖ್ಯಾತ ಘಟಕ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಡಿ, ಸಿದ್ದೀಕ್ ಕೊಕ್ಕೊ, ಇಕ್ಬಾಲ್ ಕನಕಮಜಲು,ಕೆ. ಬಿ. ಇಬ್ರಾಹಿಂ ಸೇರಿದಂತೆ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.