ಸುಳ್ಯ:25 ವರ್ಷಗಳ ಹಿಂದೆ ಸ್ಥಾಪನೆಗೊಂಡ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯನ್ನು ಹೊಂದಿರುವ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸತತ ಮೂರನೇ ಬಾರಿಗೆ ವಿಶಿಷ್ಟ ಸಾಧನಾ ಪ್ರಶಸ್ತಿ ಲಭಿಸಿದೆ.
ಸುಳ್ಯದ
ಗಾಂಧಿನಗರ ನಾಯರ್ ಕಾಂಪ್ಲೆಕ್ಸ್ನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿ ಬೆಳ್ಳಾರೆ ಮತ್ತು ಈಶ್ವರಮಂಗಲದಲ್ಲಿ ಶಾಖೆಯನ್ನು ಹೊಂದಿರುವ ಸಹಕಾರ ಸಂಘವು ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಎಂ. ಎನ್. ರಾಜೇಂದ್ರ ಕುಮಾರ್ ಅವರು ಅಲ್ಪಸಂಖ್ಯಾತರ ಸಹಕಾರ ಸಂಘದ ಅಧ್ಯಕ್ಷರಾದ ಐ. ಕೆ.ಮಹಮ್ಮದ್ ಇಕ್ಬಾಲ್ ಎಲಿಮಲೆ, ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಜ್ವಲ್ ನಾಯಕ್ ರವರಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಿ ಪ್ರಶಸ್ತಿ ಪ್ರಧಾನ ಮಾಡಿದರು , ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ್ ರೈ, ಎಸ್. ಎನ್ ಮನ್ಮಥ, ಅಲ್ಪಸಂಖ್ಯಾತರ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಟಿ. ಎಂ.ಶಾಹಿದ್ ತೆಕ್ಕಿಲ್, ನ.ಪಂ.ಸದಸ್ಯ ಸಿದ್ದಿಕ್ ಕೊಕ್ಕೊ ಮೊದಲಾದವರು ಉಪಸ್ಥಿತರಿದ್ದರು