ಸುಳ್ಯ: ಸುಳ್ಯದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಅಲ್ಪ ಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ ಘೋಷಣೆಯಾಗಿದೆ. ನ.2ರಂದು ಸಂಘದ ಆಡಳಿತ ಮಂಡಳಿಯ 15 ನಿರ್ದೇಶಕರ ಸ್ಥಾನಕ್ಕೆ

ಚುನಾವಣೆ ನಡೆಯಲಿದೆ. ಅ.25ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ.26ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.27 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ನ.2ರಂದು ಚುನಾವಣೆ ನಡೆದು ಬಳಿಕ ಮತದಾನ ನಡೆಯಲಿದೆ. ಮಹಮ್ಮದ್ ಇಕ್ಬಾಲ್ ಎಲಿಮಲೆ ಅಧ್ಯಕ್ಷರಾಗಿರುವ ಸಂಘಧ ಈಗಿನ ಆಡಳಿತ ಮಂಡಳಿಯ ಅವಧಿ ನ.17ರಂದು ಕೊನೆಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಚುನಾವಣೆ ಘೋಷಣೆಯಾಗಿದೆ.












