ಸುಳ್ಯ:ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಮಂಗಳೂರು ಮತ್ತು ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾ ಕೇಂದ್ರ ಚೊಕ್ಕಾಡಿಯ ಆವರಣದಲ್ಲಿ ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ ಹಾಗು ಹಾಲು ಕರೆಯುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು
ಶಾಸಕಿ ಭಾಗಿರಥಿ ಮುರುಳ್ಯ ಉದ್ಘಾಟಿಸಿದ್ದರು. ಕಾರ್ಯಕ್ರಮದಲ್ಲಿ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್,ಅರೆ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ,ಸೂಡ ಅಧ್ಯಕ್ಷ ಕೆ.ಎಂ. ಮುಸ್ತಾಫ, ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ,ಡಾ. ಅರುಣ್ ಕುಮಾರ್ ಶೆಟ್ಟಿ ಉಪನಿರ್ದೇಶಕರು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದಕ್ಷಿಣ ಕನ್ನಡ, ತಹಶೀಲ್ದಾರ್ ಮಂಜುಳಾ.ಎಂ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಭಗವಾನ್ ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ಮಹಾಬಲ ಕಾಂಚೋಡು ಟ್ರಸ್ಟ್ನ ವಿವಿಧ ಪದಾಧಿಕಾರಿಗಳು ಲ್ಯಾಂಪ್ ಸೊಸೈಟಿಯ ಅಧ್ಯಕ್ಷರಾದ ನೀಲಮ್ಮ ಕಣಪಿಲ, ಸಿಎ ಬ್ಯಾಂಕ್ ಅಧ್ಯಕ್ಷರಾದ ವಿಕ್ರಂ ಅಡ್ಪಂಗಾಯ ಉಪಸ್ಥಿತರಿದ್ದರು.

ತೊಡಿಕಾನ ಗ್ರಾಮದ ಮೀನಾಕ್ಷಿ ಅವರ ಹಸು 29.93 ಲೀಟರ್ ಹಾಲನ್ನು ಉತ್ಪಾದಿಸಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ 2 ಗ್ರಾಂ ಚಿನ್ನದ ನಾಣ್ಯವನ್ನು ತನ್ನದಾಗಿಸಿಕೊಂಡಿದೆ.ಎಣ್ಮೂರು ಗ್ರಾಮದ ಶ್ರೀ ಶಿವರಾಮ ಚಾಮೆ ತಡ್ಕ ಇವರ ದನವು 28.14 ಲೀಟರ್ ಹಾಲನ್ನು ಉತ್ಪಾದಿಸಿ ದ್ವಿತೀಯ ಸ್ಥಾನ ಗಳಿಸಿ 1 ಗ್ರಾಂ ಚಿನ್ನದ ನಾಣ್ಯವನ್ನು ಗಳಿಸಿಕೊಂಡಿದೆ
ಸುಳ್ಯ ಕಸಬ ದುಗಲಡ್ಕದ ಹೇಮಾವತಿ ಇವರ ಹಸು 20.04 ಲೀಟರ್ ಹಾಲನ್ನು ಉತ್ಪಾದಿಸಿ ತೃತೀಯ ಸ್ಥಾನ ದೊಂದಿಗೆ 0.5 ಗ್ರಾಂ ಚಿನ್ನದ ನಾಣ್ಯ ಗಳಿಸಿಕೊಂಡಿದೆ.ಇನ್ನುಳಿದ ಏಳು ದನಗಳು ಸಮಾಧಾನಕರ ಬಹುಮಾನವಾಗಿ ಬೆಳ್ಳಿಯ ನಾಣ್ಯಗಳನ್ನು ಗಳಿಸಿಕೊಂಡಿವೆ.
ಸ್ಪರ್ಧೆಯ ಅಂಗವಾಗಿ ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ವಿವಿಧ ವಯೋಮಾನದ ಹೆಚ್ ಎಫ್ ಜರ್ಸಿ ಮತ್ತು ದೇಸಿ ತಳಿಯ ಒಟ್ಟು 52 ಹೆಣ್ಣು ಕರುಗಳು ಪ್ರದರ್ಶನಗೊಂಡು ಒಟ್ಟು 27 ಕರುಗಳು ಬೆಳ್ಳಿಯ ನಾಣ್ಯಗಳನ್ನು ಹಾಗೂ ಆಕರ್ಷಕ ಬಹುಮಾನಗಳನ್ನು ಗೆದ್ದುಕೊಂಡವು.
ಕಾರ್ಯಕ್ರಮವನ್ನು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯದ ಮುಖ್ಯ ಪಶುವೈದ್ಯಾಧಿಕಾರಿ ಡಾ.ನಿತಿನ್ ಪ್ರಭು ನಿರ್ವಹಿಸಿದರು ಡಾ ಮೇಘಶ್ರೀ ಸಿಎಸ್ ಪಶುವೈದ್ಯಾಧಿಕಾರಿ ಕಳಂಜ, ಇಲಾಖೆಯ ಅಧಿಕಾರಿಯ ಸಿಬ್ಬಂದಿಗಳು ಮತ್ತು ಕೆಎಂಎಫ್ ಅಧಿಕಾರಿ ಮತ್ತು ಸಿಬ್ಬಂದಿಗಳು ಸಹಕರಿಸಿದರು.
















