ಸುಳ್ಯ: ಮಂಡೆಕೋಲು ಗ್ರಾಮದ ಮೈತಡ್ಕ ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಮತ್ತು ಸಂಪರ್ಕ ರಸ್ತೆಗೆ ಲೋಕೊಪಯೋಗಿ ಇಲಾಖೆಯಿಂದ 16.20 ಕೋಟಿ ಸರಕಾರದಿಂದ ಅನುದಾನ ಬಿಡುಗಡೆಯಾಗಿದೆ.ಈ ಕುರಿತು ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸಲು
ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ಗಳು ಆಗಮಿಸಿದ್ದಾರೆ. ಶಿವಮೊಗ್ಗ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಗಣೇಶ್, ಮಂಗಳೂರು ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ಆಗಮಿಸಿ ಪರಿಶೀಲನೆ ನಡೆಸಿದರು.
ಸುಳ್ಯ ಸಹಾಯಕ ನಿರ್ವಾಹಕ ಇಂಜಿನಿಯರ್ ಪೂವಯ್ಯ, ಸಹಾಯಕ ಇಂಜಿನಿಯರ್ ರಾಘವೇಂದ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸೇತುವೆಗೆ ಸರಕಾರದಿಂದ ಅನುದಾನವನ್ನು ತರಿಸಲು ಪ್ರಯತ್ನಿಸಿದ ಸುಳ್ಯ ನಗರ ಪಂಚಾಯತ್ ಮಾಜಿ ಅದ್ಯಕ್ಷ ಎಸ್.ಸಂಶುದ್ದೀನ್, ರಸ್ತೆ ಹೋರಾಟ ಸಮಿತಿ ಪದಾಧಿಕಾರಿಗಳು ಹಾಗೂ ಪ್ರಮುಖರು, ಸ್ಥಳೀಯರು ಉಪಸ್ತಿತರಿದ್ದರು.









