ಮಡಿಕೇರಿ: ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆಗೆ ಸೋಮವಾರ ಬೆಳಗಿನ ಜಾವ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿ ಪ್ರತಿಮೆಗೆ ಹಾನಿಯಾಗಿರುವ ಹಿನ್ನೆಲೆ ಸ್ಥಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಸೋಮವಾರ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣಕ್ಕೆ ಸ್ಥಳಾಂತರಿಸಲಾಗಿರುವ ಪ್ರತಿಮೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ
ಮಾತನಾಡಿದ ಶಾಸಕರು ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಮೆ ಪುನರ್ ಸ್ಥಾಪನೆ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಸಂಬಂಧಪಟ್ಟ ಎಂಜಿನಿಯರ್ಗಳು ಮತ್ತು ತಜ್ಞರ ಜೊತೆ ಚರ್ಚಿಸಿ ತ್ವರಿತವಾಗಿ ಪ್ರತಿಮೆ ಮರು ಸ್ಥಾಪನೆಗೆ ಕ್ರಮವಹಿಸಲಾಗುವುದು ಎಂದರು.
ಈ ಸಂಬಂಧಪಟ್ಟ ಅಧಿಕಾರಿಗಳು, ಎಂಜಿನಿಯರ್ಗಳು ಸ್ಥಳೀಯರ ಜೊತೆ ಸಮಾಲೋಚನೆ ನಡೆಸಲಾಗುವುದು, ಆದಷ್ಟು ಶೀಘ್ರ ವೈಜ್ಞಾನಿಕವಾಗಿ ಪ್ರತಿಮೆ ಮರು ಸ್ಥಾಪಿಸಲಾಗುವುದು, ಎಂದರು. ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರು ಪ್ರತಿಮೆ ಮರು ಸ್ಥಾಪನೆಗೆ ಸಂಬಂಧಿಸಿದಂತೆ ಲ ಸಲಹೆ, ಮಾರ್ಗದರ್ಶನ ನೀಡಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಕೆಎಸ್ಆರ್ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಗೀತಾ, ತಹಶೀಲ್ದಾರ್ ಪ್ರವೀಣ್ ಕುಮಾರ್, ಪೌರಾಯುಕ್ತರಾದ ವಿಜಯ, ನಗರಸಭೆ ಸದಸ್ಯರು ಇತರರು ಈ ಸಂದರ್ಭದಲ್ಲಿ ಇದ್ದರು.