ಬೆಂಗಳೂರು: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುಳ್ಯ ಕ್ಷೇತ್ರದ ಪ್ರಮುಖ ಬೇಡಿಕೆಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ
ಸರಕಾರದ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಮುಖ 35 ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಲಾಯಿತು. ಸಂಪುಟ ಸಭೆಯಲ್ಲಿ ಚರ್ಚಿಸಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ಮನವಿಯಲ್ಲಿ ಸಲ್ಲಿಸಲಾಯಿತು.ನಿರಂತರ ವಿದ್ಯುತ್ ಪೂರೈಕೆಗಾಗಿ 33 ಕೆವಿ ವಿದ್ಯುತ್ ಸಂಪರ್ಕವನ್ನು ಭೂಗತ ಲೈನ್ ಅಗಿ ಪರಿವರ್ತಿಸಬೇಕು.ಪ್ರವಾಸೋದ್ಯಮ ಉತ್ತೇಜಿಸುವ ನಿಟ್ಟಿನಲ್ಲಿ 1837ರ ಅಮರ ಸುಳ್ಯದ ಸ್ವಾತಂತ್ರ್ಯ ಹೋರಾಟದ ನೆನಪಿಗೆ ಕೆದಂಬಾಡಿ ರಾಮಯ್ಯಗೌಡ ಥೀಮ್ ಪಾರ್ಕ್ ನಿರ್ಮಾಣ ಹಾಗೂ
ತುಳುಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಿಸುವಂತೆ ಮನವಿ ಸಲ್ಲಿಸಲಾಗಿದೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.










