ತೆಲಂಗಾಣ:ತೆಲಂಗಾಣ ವಿಧಾನಸಭಾ ಚುನಾವಣೆಯ ಸಿದ್ಧತೆ ಹಾಗೂ ಸಂಘಟನಾ ಕಾರ್ಯದಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳಿರುವ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಕಾರ್ಯದಲ್ಲಿ ಭಾಗಿಯಾದರು. ಮಂಚೇರಿಯಲ್ ಜಿಲ್ಲೆಯ ಬೆಳ್ಳಂಪಲ್ಲಿ ತಾಲೂಕಿನ ವಿಧಾನಸಭಾ ಕ್ಷೇತ್ರದ
ಕನ್ನೆಪಲ್ಲಿ ಮಂಡಲದ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆಯ ತಯಾರಿಗಳ ಕುರಿತು ನಡೆದ ಪ್ರಮುಖರ ಸಭೆಯಲ್ಲಿ ಭಾಗವಹಿಸಿದ ಅವರು ಈ ಸಂದರ್ಭದಲ್ಲಿ ಸ್ಥಳೀಯ ಪಕ್ಷದ ಕಚೇರಿಯಲ್ಲಿ ಬಿಜೆಪಿಯ ಧ್ವಜಾರೋಹಣ ನಡೆಸಿದರು. ಎಲ್ಲರಂ ಗ್ರಾಮ ದಲ್ಲಿ ಸ್ಥಳೀಯ ಜನರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸ್ಥಳೀಯ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು ನಂತರ ವಿವಿಧ ಕಡಗಳಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾದರು
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು. ಎಂದು ಶಾಸಕರ ಕಚೇರಿ ಮೂಲಗಳು ತಿಳಿಸಿವೆ.