ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಅವರು ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ರಸ್ತೆ ಅಭಿವೃದ್ಧಿ, ವಿದ್ಯುತ್, ಹಕ್ಕು ಪತ್ರ ಸಾರ್ವಜನಿಕ ಸಮಸ್ಯೆಗಳು ಹಾಗೂ ವೈಯುಕ್ತಿಕ ಸಮಸ್ಯೆಗಳ ಕುರಿತು ಸಾರ್ವಜನಿಕರು ಅರ್ಜಿ, ಅಹವಾಲು ಸಲ್ಲಿಸಿದರು.
ವಾರದಲ್ಲಿ ಎರಡು ದಿನ ಜನ ಸಂಪರ್ಕ:
ಶಾಸಕಿ ಭಾಗೀರಥಿ ಮುರುಳ್ಯ ಅವರು ವಾರದಲ್ಲಿ ಎರಡು ದಿನ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸೋಮವಾರ ಬೆಳಿಗ್ಗೆ 10 ರಿಂದ ಸುಳ್ಯ ಶಾಸಕರ ಕಚೇರಿಯಲ್ಲಿ ಹಾಗೂ ಮಂಗಳವಾರ ಪೂ.10ರಿಂದ ಕಡಬ ಆಡಳಿತ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಶಾಸಕರ ಕಚೇರಿಯ ಪ್ರಕಟಣೆ ತಿಳಿಸಿದೆ.





