ಸುಳ್ಯ: ಅತಿ ವಿರಳ ಕಾಯಿಲೆ (HYPER IGE mediate Mast cell activation syndrome)ಯಿಂದ ಬಳಲಿ ಚಿಕಿತ್ಸೆ ಪಡೆಯುತ್ತಿರುವ ಚಾಂದಿನಿ ಜಿ.ಡಿ. ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಚಾಂದಿನಿ ಅವರು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ
ಚಿಕಿತ್ಸೆ ಪಡೆಯುತ್ತಿದ್ದಾರೆ. ಅತಿ ವಿರಳ ಕಾಯಿಲೆಯಿಂದ ಬಳಲುತ್ತಿದ್ದು ಲಕ್ಷಾಂತರ ರೂ ಖರ್ಚಾಗಿದೆ. ಚಿಕಿತ್ಸೆಗೆ ಸರಕಾರದಿಂದ ಹೆಚ್ಚಿನ ನೆರವು ಒದಗಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಶಾಸಕರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಸುವರ್ಣಿನಿ ಎನ್.ಎಸ್, ಕೆವಿಜಿ ಮೆಡಿಕಲ್ ಕಾಲೇಜಿನ ಪಿಆರ್ಒ ರಘುಪತಿ ಮಂಡೆಕೋಲು, ಸ್ವಸ್ತಿಕ್ , ಬಿಜೆಪಿ ದ.ಕ. ಜಿಲ್ಲಾ ಸಾಮಾಜಿಕ ಜಾಲಾತಾಣ ಸದಸ್ಯ ಪ್ರಸಾದ್ ಕಾಟೂರು ಉಪಸ್ಥಿತರಿದ್ದರು.