ಬೆಂಗಳೂರು:ಇತ್ತೀಚೆಗೆ ಕಲ್ಮಡ್ಕದಲ್ಲಿ ತಂತಿಯಿಂದ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಭರತ್ ಹಾಗೂ ರಮೇಶ್ ಅವರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ ಸಲ್ಲಿಸಿದ್ದಾರೆ.ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮೃತರ ಕುಟುಂಬಗಳಿಗೆ ಸರ್ಕಾರದ ಅಗತ್ಯ ನೆರವು ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಶಾಸಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.









