ಬೆಂಗಳೂರು:’ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರನ್ನು ಬೆಂಗಳೂರು ಕಛೇರಿಯಲ್ಲಿ ಭೇಟಿ ಸುಳ್ಯ ತಾಲೂಕಿನ ಬಹು ಬೇಡಿಕೆಯ 110 ಕೆವಿ ವಿದ್ಯುತ್ ಕಾಮಗಾರಿಯ ಆರಂಭದ ಕುರಿತು ಚರ್ಚೆ ನಡೆಸಿದರು. ಸುಳ್ಯದ ವಿದ್ಯುತ್
ಸಮಸ್ಯೆ ಪರಿಹಾರಕ್ಕೆ ಆದಷ್ಟು ಬೇಗ ಕೆಲಸ ಪ್ರಾರಂಭಿಸಬೇಕು ಎಂದು ಹೇಳಿದರು. ಇದಕ್ಕೆ ಎಂ ಡಿ ಅವರು ಮುಂದಿನ 15 ದಿನಗಳಲ್ಲಿ ಕೆಲಸ ಆರಂಭಿಸಿ ಶೀಘ್ರದಲ್ಲಿ ಕಾಮಗಾರಿ ಮುಗಿಸಿಕೊಡುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಕುಮಾರ್ ರೈ ಮೇನಾಲ ಮತ್ತಿತರರು ಉಪಸ್ಥಿತರಿದ್ದರು.