ಸುಳ್ಯ: ಸುಳ್ಯ ವಿಧಾನಸಭಾ ಕ್ಷೆತ್ರ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು ಆನೆ ಹಾವಳಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವರಾದ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಡಬ ತಾಲೂಕಿನ ಐತೂರು, ಕೊಣಾಜೆ, ಕೊಂಬಾರು, ಮತ್ತು ಸುಬ್ರಹ್ಮಣ್ಯ ಹಾಗೂ
ಸುತ್ತಮುತ್ತಲಿನ ಭಾಗ ಸೇರಿ ವಿವಿಧ ಗ್ರಾಮಗಳಲ್ಲಿ ಕಾಡಾನೆ ಹಾವಳಿಯಿಂದ ಸಮಸ್ಯೆ ಉಂಟಾಗಿದ್ದು ಆದ್ದರಿಂದ ಸದರಿ ಆನೆಗಳನ್ನು ಆನೆ ಶಿಬಿರಗಳಿಗೆ ಸ್ಥಳಾಂತರಿಸಬೇಕಾಗಿ ಮತ್ತು ಹಾನಿಯನ್ನು ತಪ್ಪಿಸಲು ಆನೆ ಕಂದಕ, ಸೋಲಾರ್ ಬೇಲಿ ಮತ್ತು ಸೋಲಾರ್ ಬೀದಿ ದೀಪ ಸಂರಕ್ಷಣಾ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ವಿಕಾಸ ಸೌಧ ಕಛೇರಿಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಪರಿಶೀಲಿಸಿ ಸೂಕ್ತ ಕ್ರಮ ಕೈಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಲೋಕೋಪಯೋಗಿ ಇಲಾಖೆಯ ಉಪವಿಭಾಗ ಪ್ರಾರಂಭಿಸಲು ಮನವಿ:
ಕಡಬವನ್ನು ನೂತನ ತಾಲೂಕನ್ನಾಗಿ ರಚಿಸಲಾಗಿದ್ದು, ಸದ್ರಿ ತಾಲೂಕಿಗೆ ಲೋಕೋಪಯೋಗಿ ಇಲಾಖೆಯ ಉಪವಿಭಾಗದ ಕಛೇರಿಯನ್ನು ಪ್ರಾರಂಭಿಸಿರುವುದಿಲ್ಲ. ಪ್ರಸ್ತುತ ಸುಬ್ರಹ್ಮಣ್ಯದಲ್ಲಿರುವ ಲೋಕೋಪಯೋಗಿ ಉಪವಿಭಾಗವನ್ನು ಕಡಬಕ್ಕೆ ಸ್ಥಳಾಂತರಿಸಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.