ಬೆಂಗಳೂರು:ಅರಂತೋಡು- ಮರ್ಕಂಜ- ಎಲಿಮಲೆ ರಸ್ತೆಯ ಅಭಿವೃದ್ಧಿಯ ಹಿನ್ನಲೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಅರಂತೋಡು- ಮರ್ಕಂಜ- ಎಲಿಮಲೆ ರಸ್ತೆಯನ್ನು
ಅಭಿವೃದ್ಧಿ ಮಾಡಬೇಕಾದ ಅನಿವಾರ್ಯತೆ ವಿವರಿಸಿದ ಅವರು ಕಾಮಗಾರಿಗಾಗಿ ಅನುದಾನಕ್ಕಾಗಿ ಮನವಿ ಮಾಡಿದರು.ರಸ್ತೆ ಅಭಿವೃದ್ಧಿಗೆ ಶೀಘ್ರವಾಗಿ ಅನುದಾನ ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದರು. ಶಾಸಕಿ ಹಲವು ಬಾರಿ ಸಚಿವರನ್ನು ಭೇಟಿ ಮಾಡಿ ರಸ್ತೆ ಅಭಿವೃದ್ಧಿಗೆ ಮನವಿ ಸಲ್ಲಿಸಿದ್ದಾರೆ. ಸಚಿವರು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿಯೂ ಬೇಡಿಕೆ ಇರಿಸಿದ್ದರು.
ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಉಪಸ್ಥಿತರಿದ್ದರು.





