ಸುಳ್ಯ:ಶಾಸಕಿ ಭಾಗೀರಥಿ ಮುರುಳ್ಯ ಅವರು ಕಂದಾಯ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಂದಾಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದಲ್ಲಿ ಜಂಟಿ ಸರ್ವೆ ನಡೆಸುವ ಬಗ್ಗೆ ಮನವಿ ಸಲ್ಲಿಸಿ ಚರ್ಚಿಸಿದರು. ಸಾರ್ವಜನಿಕರಿಗೆ ನಿವೇಶನ ಹಾಗೂ
ಇನ್ನಿತರ ಸರ್ಕಾರಿ ಕಾರ್ಯಕ್ರಮಗಳ ಉಪಯೋಗ ಸರ್ಕಾರಿ ಸವಲತ್ತನ್ನು ಪಡೆಯಲು ಅಸಾಧ್ಯವಾಗಿರುತ್ತದೆ.ಆದುದರಿಂದ ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸರ್ವೆ ನಂಬ್ರ186 ರನ್ನು ತುರ್ತಾಗಿ ಜಂಟಿ ಸರ್ವೆ ನಡೆಸಿ ಸರ್ಕಾರಿ ಮತ್ತು ಅರಣ್ಯ ಇಲಾಖೆ ವ್ಯಾಪ್ತಿಯ ಜಾಗಗಳ ಗಡಿ ಗುರುತು ನಡೆಸುಪ ಸಲುವಾಗಿ ಸೂಕ್ತ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸಚಿವರಿಗೆ ಶಾಸಕರು ಮನವಿ ಸಲ್ಲಿಸಿದರು.
































