ಬೆಂಗಳೂರು:ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ಮಾಡಿ ಚರ್ಚೆ ನಡೆಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ತಲೆದೋರಿರುವ ಬಸ್ಸುಗಳ ಸಮಸ್ಯೆ ಪರಿಹರಿಸುವಂತೆ ಸಚಿವರಲ್ಲಿ ಮನವಿ ಸಲ್ಲಿಸಲಾಯಿತು. ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ
ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಬಸ್ ವ್ಯವಸ್ಥೆಯನ್ನು ಕಲ್ಪಿಸುವಂತೆ ವಿನಂತಿಸಿದರು. ಕೆಳ ದಿನಗಳ ಹಿಂದೆ ಸಚಿವರಿಗೆ ಕರೆಯ ಮೂಲಕ ಸಮಸ್ಯೆಗಳನ್ನು ತಿಳಿಸಿದ್ದರು. ಒಂದು ವಾರದ ಒಳಗೆ ಹೆಚ್ಚುವರಿಯಾಗಿ 10 ಬಸ್ಸುಗಳನ್ನು ಒದಗಿಸುವಂತೆ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.
ಈ ಸಂದರ್ಭದಲ್ಲಿ ಕ್ಷೇತ್ರದ ವಿವಿಧ ದೇವಾಲಯಗಳ ಜೀರ್ಣೊದ್ದಾರಕ್ಕೆ ಅನುದಾನವನ್ನು ಬಿಡುಗಡೆ ಮಾಡುವಂತೆಯೂ ವಿನಂತಿಸಲಾಯಿತು.