ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ನ.27 ರಿಂದ ಡಿ.2ರ ತನಕ ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಿಗೆ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ.ವಿಧಾನ ಸಭೆಯ ವಸತಿ ಸೌಕರ್ಯಗಳ ಸಮಿತಿಯ ವತಿಯಿಂದ ಅಧ್ಯಯನ ಪ್ರವಾಸ ನಡೆಯಲಿದೆ. ಉಪ ಸಭಾಧ್ಯಕ್ಷರು ಹಾಗೂ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ನೇತೃತ್ವದಲ್ಲಿ ಸಮಿತಿ ಸದಸ್ಯರಾದ ಶಾಸಕಿ ಭಾಗೀರಥಿ ಮುರುಳ್ಯ ಸೇರಿ 12 ಮಂದಿಯ ತಂಡ ಅಧ್ಯಯನ ಪ್ರವಾಸ ಕೈಗೊಳ್ಳಲಿದೆ ಎಂದು ತಿಳಿದು ಬಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.