ಅರಂತೋಡು:ಶಾಸಕಿ ಭಾಗಿರಥಿ ಮುರುಳ್ಯ ಅವರು ಅರಂತೋಡು ಗ್ರಾಮದ ಅರಮನೆಗಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರಮನೆಗಯಕ್ಕೆ ಕಿಂಡಿ ಆಣೆಕಟ್ಟು, ಸೇತುವೆ ನಿರ್ಮಾಣದ ಬಗ್ಗೆ ಪರಿಶೀಲನೆ ನಡೆಸಿದ ಅವರು ಈ ಕುರಿತು ನೀರಾವರಿ ಇಲಾಖೆಯ ಇಂಜಿನಿಯರ್ಗಳ ಜೊತೆ ಚರ್ಚೆ ನಡೆಸಿದರು. ಅರಂತೋಡು ಪಂಚಾಯತ್ ವ್ಯಾಪ್ತಿಯ
ಅರಮನೆಗಯ ತೂಗು ಸೇತುವೆಯ ಸಂಚಾರವನ್ನು ಗ್ರಾಮ ಪಂಚಾಯತ್ ನಿರ್ಬಂಧಿಸಿತು. ಅರಮನೆ ಗಾಯದಲ್ಲಿ ಶಾಶ್ವತ ಸೇತುವೆ ನಿರ್ಮಾಣಕ್ಕೆ ಆರಂತೋಡು ಪಂಚಾಯತ್ ಅಧ್ಯಕ್ಷರಾದ ಕೇಶವ ಆಡ್ತಲೆ, ಸಹಕಾರಿ ಸಂಘ ಅಧ್ಯಕ್ಷರಾದ ಸಂತೋಷ ಕುತ್ತಮೊಟ್ಟೆ, ಪಂಚಾಯತ್ ಉಪಾಧ್ಯಕ್ಷರಾದ ಭವಾನಿ. ಸಿ. ಎ. ಪಂಚಾಯತ್ ಸದಸ್ಯರಾದ ವೆಂಕಟರಮಣ ಪೆತ್ತಾಜೆಯವರಿಂದ ನಿಯೋಗ
ಮನವಿ ಸಲ್ಲಿಸಿದರು. ಮನವಿಗೆ ಕೂಡಲೇ ಸ್ಪಂದಿಸಿದ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಆರಂತೋಡು ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ, ನೀರಾವರಿ ಇಲಾಖೆಯ ಇಂಜಿನಿಯರ್ಗಳಾದ ಪ್ರಸನ್ನ ಶೇಟ್, ಕಿರಣ್ ಮತ್ತು ಅರಮನೆ ಗಾಯದ ನಿವಾಸಿಗಳು ಉಪಸ್ಥಿತರಿದ್ದರು.