ಸುಳ್ಯ: ಸುಳ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಭೇಟಿ ನೀಡಿದರು. ಸರ್ಕಾರದ ಶಕ್ತಿ ಯೋಜನೆಯ ಅನುಷ್ಠಾನದ ಕುರಿತು ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ನಂತರ ಮಹಿಳಾ ಪ್ರಯಾಣಿಕರ ಜೊತೆ ಮಾತುಕತೆ ನಡೆಸಿ,ಮಹಿಳಾ ವಿಶ್ರಾಂತಿ ಕೊಠಡಿ
ಮತ್ತು ಶಿಶು ಆರೈಕೆ ಕೊಠಡಿ ತೆರಳಿ ಪರಿಶೀಲನೆ ನಡೆಸಿದರು. ಬಸ್ ಪ್ರಯಾಣದ ಸಂದರ್ಭದಲ್ಲಿ ಮಹಿಳೆಯರಿಗೆ ಮತ್ತು ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆಗಾಲದಲ್ಲಿ ಪರಿಸರವನ್ನು ಸ್ವಚ್ಛವಾಗಿಡಬೇಕು ತಿಳಿಸಿದರು. ನಂತರ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಮೂಲಭೂತ ಸೌಕರ್ಯಗಳ ವೀಕ್ಷಣೆ ಮಾಡಿದರು.ಈ ಸಂದರ್ಭದಲ್ಲಿ ಪಕ್ಷದ ಹಿರಿಯರು, ಜನಪ್ರತಿನಿದಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.