ಸುಳ್ಯ:ಸುಳ್ಯ ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಕೆಳ ಭಾಗವಾಗಿ ಸರಕಾರಿ ಪದವಿಪೂರ್ವ ಕಾಲೇಜಿನ ಕಡೆಗೆ ತೆರಳುವ ರಸ್ತೆಯಲ್ಲಿ ವಿದ್ಯುತ್ ಕಂಬವನ್ನು ಸ್ಥಳಾಂತರ ಮಾಡದೆ ವಿದ್ಯುತ್ ಕಂಬವನ್ನು ಸೇರಿಸಿ ಕಾಂಕ್ರೀಟ್ ಮಾಡಿ ರಸ್ತೆ ಅಭಿವೃದ್ಧಿ ಮಾಡಿರುವುದನ್ನು ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು
ಶಾಸಕರು ನಗರ ಪಂಚಾಯತ್ ಆಡಳಿತಾಧಿಕಾರಿಯಾದ ತಹಶೀಲ್ದಾರ್, ನಗರ ಪಂಚಾಯತ್ ಮುಖ್ಯಾಧಿಕಾರಿ ಹಾಗು ಮೆಸ್ಕಾಂ ಇಂಜಿನಿಯರ್ಗಳಿಂದ ಮಾಹಿತಿ ಪಡೆದರು.ವಿದ್ಯುತ್ ಕಂಬವನ್ನು ಸ್ಥಳಾಂತರ ಮಾಡದೆ ಕಾಂಕ್ರೀಟೀಕರಣ ಮಾಡಿರುವುದು ಅಪಾಯಕಾರಿಯಾಗಿದೆ. ಆದುದರಿಂದ ವಿದ್ಯುತ್ ಕಂಬಗಳನ್ನು ತೆರವು ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚಿಸಿದರು.ರಸ್ತೆ ಕಾಂಕ್ರೀಟೀಕರಣ ಮತ್ತಿತರ ವಿಷಯಗಳ ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ನಗರಪಂಚಾಯತ್ ಮಾಜಿ ಅಧ್ಯಕ್ಷರಾದ ವಿನಯಕುಮಾರ್ ಕಂದಡ್ಕ, ಶಶಿಕಲಾ ನೀರಬಿದಿರೆ,ಮಾಜಿ ಸದಸ್ಯೆ ಕಿಶೋರಿ ಶೆಟ್ ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಪ್ರಮುಖರಾದ ಜಿನ್ನಪ್ಪ ಪೂಜಾರಿ,ಪ್ರಸಾದ್ ಕಾಟೂರು ಉಪಸ್ಥಿತರಿದ್ದರು.






