ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಅವರು ಮೇ.29ರಂದು ಸುಳ್ಯ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ಹೆರಿಗೆ ತಜ್ಞರ ಕೊರತೆಯಿಂದ ಆಗಿರುವ ಸಮಸ್ಯೆಯ ಬಗ್ಗೆ ಸಮಾಲೋಚನೆ ನಡೆಸಲು ಶಾಸಕರು ವಾರದೊಳಗೆ ಎರಡನೇ ಬಾರಿ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ತಾಲೂಕು ಆಸ್ಪತ್ರೆಯಲ್ಲಿ
ಕರೆಯಾಧಾರಿತ ಸೇವೆ ಸಲ್ಲಿಸುತ್ತಿದ್ದ ಹೆರಿಗೆ ತಜ್ಞರಾದ ಡಾ. ವೀಣಾ ಎನ್ ಅವರ ಜೊತೆ ಸಮಾಲೋಚನೆ ನಡೆಸಿದರು. ತಾಲೂಕು ಆಸ್ಪತ್ರೆಯಲ್ಲಿ ಖಾಯಂ ಹೆರಿಗೆ ತಜ್ಞರ ನೇಮಕಾತಿ ಆಗುವ ವರೆಗೆ ಸೇವೆ ಮುಂದುವರಿಸುವಂತೆ ಡಾ. ವೀಣಾ ಎನ್ ಅವರಿಗೆ ಸೂಚಿಸಿದ್ದಾರೆ
ತಾಲೂಕು ಆಸ್ಪತ್ರೆಯ ಸಿಬ್ಬಂಧಿಗಳು ಸಾರ್ವಜನಿಕರ ಹಿತದೃಷ್ಟಿಯಿಂದ ವೈದ್ಯರೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಸೂಚಿರುತ್ತಾರೆ. ಸಿಬ್ಬಂದಿಗಳ ದೂರುಗಳು ಅಥವಾ ಇತರ ದೂರು, ಸಮಸ್ಯೆಗಳ ಬಗ್ಗೆ ಇಲಾಖಾ ನಿಯಮಗಳಂತೆ ಕ್ರಮ ಕೈಗೊಳ್ಳುವಂತೆ ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳಿಗೆ ಸೂಚಿಸಿರುತ್ತಾರೆ. ತಾಲೂಕು ಆಸ್ಪತ್ರೆಯ ಸಿಬ್ಬಂದಿಗಳಲ್ಲಿ ಶಿಸ್ತನ್ನು ಕಾಪಾಡುವ ಜವಾಬ್ದಾರಿ ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳದ್ದಾಗಿದೆ ಎಂದು ಶಾಸಕರು ಸೂಚಿಸಿದರು.