ಸುಳ್ಯ:ಸುಳ್ಯದ ಕೊಡಿಯಾಲಬೈಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಗಳ ವಸತಿ ನಿಲಯಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಸತಿ ನಿಲಯದ
ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು ಮತ್ತು ವಿದ್ಯಾರ್ಥಿಗಳ ಮತ್ತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಎ.ವಿ.ತೀರ್ಥರಾಮ, ಎಸ್.ಎನ್. ಮನ್ಮಥ,ಸಂತೋಷ್ ಜಾಕೆ,ಸುನಿಲ್ ಕೇರ್ಪಳ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಗೀತಾ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.







