ಬಂಟ್ವಾಳ:ಬಿ.ಸಿ.ರೋಡು ಬಸ್ ನಿಲ್ದಾಣದಲ್ಲಿ ಹತ್ಯೆಗೀಡಾದ ಲಾವಣ್ಯಳ ಬಂಟ್ವಾಳ ತಾಲೂಕಿನ ಕಕ್ಯಪದವು ಸಮೀಪದ ಉಳಿ ಗ್ರಾಮದ ಕೊಂಡಗೆಯಲ್ಲಿರುವ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿ ಶಾಸಕರು ಹಾಗು
ಬಿಜೆಪಿ ಮುಖಂಡರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.ಈ ಸಂದರ್ಭದಲ್ಲಿ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲು,
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮೂಡಬಿದಿರೆ ಶಾಸಕರಾದ ಉಮಾನಾಥ ಕೋಟ್ಯಾನ್, ಹಾಗೂ ಪುತ್ತೂರು ಮಾಜಿ ಶಾಸಕರಾದ ಸಂಜೀವ ಮಠಂದೂರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.








