ಸುಳ್ಯ:ಶಾಸಕಿ ಭಾಗೀರಥಿ ಮುರುಳ್ಯ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ ಅವರನ್ನು ಅವರ ನಿವಾಸದ ಕಛೇರಿಯಲ್ಲಿ ಭೇಟಿಯಾಗಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ
ಎರಡು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳನ್ನು ಒದಗಿಸುವಂತೆ ಮತ್ತು ರಸ್ತೆಗಳಿಗೆ ಹಾಗೂ ಸುಳ್ಯ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ವಿನಂತಿ ಮಾಡಿದರು.