ಸುಳ್ಯ: ಸುಳ್ಯ ಬಸ್ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಳ್ಯದಿಂದ ವಿವಿಧ ಕಡೆಗಳಿಗೆ ತೆರಳುವ ಬಸ್ಸುಗಳು ಸರಿಯಾದ ಸಮಯದಲ್ಲಿ ಸಂಚರಿಸದೆ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ
ದಿಢೀರ್ ಭೇಟಿ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ ಸರಿಯಾದ ಸಮಯಕ್ಕೆ ಬಸ್ಸು ಕಲ್ಪಿಸಿ ಸಾರ್ವಜನಿಕರಿಗೆ ಬಸ್ಸು ಲಭ್ಯವಾಗುವಂತೆ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಒಂದು ವಾರದಲ್ಲೇ ಬಸ್ ವ್ಯವಸ್ಥೆ ಸರಿ ಮಾಡಬೇಕು. ತಪ್ಪಿದಲ್ಲಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು. ಸ್ಥಳದಲ್ಲಿಯೇ ವಿದ್ಯಾರ್ಥಿಗಳು, ಮಹಿಳೆಯರು, ಸಾರ್ವಜನಿಕರು ಶಾಸಕರ ಜೊತೆ ಬಸ್ ಸಮಸ್ಯೆಯನ್ನು ಹೇಳಿಕೊಂಡರು. ಇದಕ್ಕೆ ಸ್ಪಂದಿಸಿದ ಶಾಸಕರು ಶೀಘ್ರವಾಗಿ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಎನ್ ಎ, ರಾಮಚಂದ್ರ, ಎಸ್,ಎನ್, ಮನ್ಮಥ, ರಂಜನ್, ಪ್ರಸಾದ್ ಕಾಟೂರು ಉಪಸ್ಥಿತರಿದ್ದರು.