ಸುಬ್ರಹ್ಮಣ್ಯ:ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಆಗಮಿಸಿದ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವನ್ನು ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಚಿವರಿಗೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು. ಈಗಾಗಲೇ ಸಲ್ಲಿಸಲಾಗಿರುವ ಕಡಮಕಲ್ಲು-ಗಾಳಿಬೀಡು- ಮಡಿಕೇರಿ ರಸ್ತೆ ಮತ್ತು ತೋಡಿಕಾನ- ಪಟ್ಟಿ- ಭಾಗಮಂಡಲ ರಸ್ತೆ ನಿರ್ಮಾಣಕ್ಕೆ
ಅರಣ್ಯ ಇಲಾಖೆಯಿಂದ ಬೇಕಾದ ಸಹಕಾರ ನೀಡಬೇಕು.
ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆಯ ವರದಿಗಳನ್ನು ಶೀಘ್ರವಾಗಿ ಪ್ರಕಟಿಸಬೇಕು.ಅರಣ್ಯ ಪ್ರದೇಶದಲ್ಲಿ ವಾಸಿಸುವ ಜನರನ್ನು ಒಕ್ಕಲೆಬ್ಬಿಸದೆ ಸದರಿ ಜಾಗದಲ್ಲಿ ವಾಸಿಸುವುದಕ್ಕೆ ಅವಕಾಶ ಮಾಡಿಕೊಟ್ಟು ಹಕ್ಕುಪತ್ರವನ್ನು ಒದಗಿಸಬೇಕು.ಕೃಷಿಕರ ತೋಟಗಳಿಗೆ ಇಲಾಖೆಯ

ಅನುದಾನ ಸೋಲಾರ್ ಬೇಲಿ ನಿರ್ಮಾಣಕ್ಕೆ ಪ್ರಸ್ತುತ ಒದಗಿಸುವ ಶೇಕಡ 50:50 ಅನುದಾನದ ಬದಲಿಗೆ 75:25ಅನುದಾನವನ್ನು ಒದಗಿಸಬೇಕು.ಕೃಷಿ ತೋಟಗಳಿಗೆ ಹಾನಿಯಾದ ಪರಿಹಾರ ಮೊತ್ತವನ್ನು ಹೆಚ್ಚಿಸಿ ಅದಷ್ಟು ಬೇಗ ಬಿಡುಗಡೆಗೊಳಿಸಿ ಸಂಕಷ್ಟದಲ್ಲಿರುವ ರೈತರಿಗೆ ನೇರವಾಗಬೇಕು ಇತ್ಯಾದಿ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ,ಗುತ್ತಿಗಾರು ಪಂಚಾಯತ್ ಮಾಜಿ ಸದಸ್ಯ ರಾಕೇಶ್ ಮೆಟ್ಟಿನಡ್ಕ ಉಪಸ್ಥಿತರಿದ್ದರು.














