ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಜೂ.12 ರಂದು ಸುಳ್ಯ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಕಾರ್ಯಾರಂಭ ಮಾಡಲಿದೆ.ಬೆಳಗ್ಗೆ 6ಕ್ಕೆ ಗಣಹೋಮ. ಬೆಳಗ್ಗೆ 7 ಗಂಟೆಗೆ ದೀಪ ಪ್ರಜ್ವಲನೆ ನಡೆಯಲಿದೆ. ಬೂತ್ ಶಕ್ತಿ ಕೇಂದ್ರ,ಮಹಾ ಶಕ್ತಿ ಕೇಂದ್ರ, ಮಂಡಲ, ಜಿಲ್ಲಾ, ರಾಜ್ಯ ಮಟ್ಟದ ಜವಾಬ್ದಾರಿಯ ಪದಾಧಿಕಾರಿಗಳು, ಪ್ರಮುಖರು , ಕಾರ್ಯಕರ್ತರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು
ಬಿಜೆಪಿ ಸುಳ್ಯ ಮಂಡಲ ಸಮಿತಿ ಪ್ರಕಟಣೆ ತಿಳಿಸಿದೆ.