ಸುಳ್ಯ: ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯ ಆರೋಗ್ಯ ಕೊಠಡಿ, ಪ್ರಾಂಶುಪಾಲರ ನೂತನ ಕೊಠಡಿ, ಐಟಿ ಮತ್ತು ಕಂಪ್ಯೂಟರ್ ಕೊಠಡಿ, ಶೌಚಾಲಯ, ಸ್ಮಾರ್ಟ್ ಕ್ಲಾಸ್, ಗ್ರಂಥಾಲಯಗಳಿಗೆ
ತೆರಳಿ ಮಾಹಿತಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸರ್ಕಾರದಿಂದ ಹೆಚ್ಚು ಯೋಜನೆಗಳನ್ನು ತರಲು ಪ್ರಯತ್ನ ನಡೆಸುವುದಾಗಿ ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಬೊಮ್ಮೆಟ್ಟಿ, ಉಪಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ ಉಪಸ್ಥಿತರಿದ್ದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಹೇಶ್ ಕುಮಾರ್ ಮೇನಾಲ, ಜಿನ್ನಪ್ಪ ಪೂಜಾರಿ, ಚಂದ್ರಶೇಖರ ನೆಡಿಲ್,ಕುಶಾಲಪ್ಪ ಪೆರುವಾಜೆ, ರಾಜೇಶ್ವರಿ ಕಾಡುತೋಟ, ಶಿಕ್ಷಕರಾದ ನಟರಾಜ್, ಡಾ.ಸುಂದರ ಕೇನಾಜೆ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿ ನಿಲಯಕ್ಕೆ ಭೇಟಿ:
ಸುಳ್ಯ ತಾಲೂಕು ಪಂಚಾಯತ್ ಬಳಿಯ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು. ನಂತರ ವಿದ್ಯಾರ್ಥಿ ನಿಲಯದ ಅಡುಗೆ ಕೊಠಡಿ, ವಿಶ್ರಾಂತಿ ಕೊಠಡಿಗೆ ತೆರಳಿ ಸೌಕರ್ಯಗನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್, ಸಿಬ್ಬಂದಿ ಉಪಸ್ಥಿತರಿದ್ದರು.