ಮಂಗಳೂರು: ರಾಜ್ಯ ವಿಧಾನ ಪರಿಷತ್ನ ದ.ಕ. ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ಅ.21ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ರಾಜು ಪೂಜಾರಿ ಅವರಿಗೆ ಟಿಕೆಟ್ ನೀಡಿದೆ.ಬೈಂದೂರಿನ
ರಾಜು ಪೂಜಾರಿ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದನೆ ನೀಡಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.