ಸುಳ್ಯ: ವಿಧಾನ ಪರಿಷತ್ನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಎಸ್.ಎಲ್.ಭೋಜೇ ಗೌಡ ಪರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಸುಳ್ಯದಲ್ಲಿ
ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು. ಕೆವಿಜಿ ಕ್ಯಾಂಪಸ್ನ ವಿವಿಧ ಕಾಲೆಜುಗಳಿಗೆ ತೆರಳಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು.
ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ನಿಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ.ಎ.ಟಿ, ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸಂಜಯ್ ಪ್ರಭು,ವಿಕಾಸ್ ಪುತ್ತೂರು, ವಿನಯ ಕುಮಾರ್ ಮುಳುಗಾಡು, ಶ್ರೀಕಾಂತ್ ಮಾವಿನಕಟ್ಟೆ, ಬುದ್ಧನಾಯ್ಕ್, ಚನಿಯ ಕಲ್ತಡ್ಕ, ಶಶಿಕಲಾ ನೀರಬಿದಿರೆ, ಬೂಡು ರಾಧಾಕೃಷ್ಣ ರೈ, ಜಿನ್ನಪ್ಪ ಪೂಜಾರಿ, ಪ್ರದೀಪ್ ಕೊಲ್ಲರಮೂಲೆ, ಪ್ರಸಾದ್ ಕಾಟೂರು, ಅವಿನಾಶ್ ಕುರುಂಜಿ, ಹೇಮಂತ್ ಕಂದಡ್ಕ ಮತ್ತಿತರರು ಉಪಸ್ಥಿತರಿದ್ದರು.