ಮಂಗಳೂರು: ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮತಗಳ ಎಣಿಕೆ ಪೂರ್ಣಗೊಂಡಿದ್ದು ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು 3,654 ಮತಗಳು
ಪಡೆದು 1697 ಮತಗಳ ಅಂತರದ ಗೆಲುವು ದಾಖಲಿಸಿದದರು. ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ 1957 ಮತಗಳು ಪಡೆದರೆ, ಎಸ್ಡಿಪಿಐ ಅಭ್ಯರ್ಥಿ 195 ಮತಗಳು ಬಂದವು.ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ
ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭಗೊಂಡಿತ್ತು. ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಕಾರಣ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದಿತ್ತು.