ಮಂಗಳೂರು: ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆಯ ಮತಗಳ ಎಣಿಕೆ ಆರಂಭಗೊಂಡಿದೆ.ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ.
ಮತಪೆಟ್ಟಿಗೆಗಳನ್ನು ತೆರೆದು
ಮಿಶ್ರಣ ಮಾಡಿ ಮತಪತ್ರಗಳ ಎಣಿಕೆ ಹಾಕಬೇಕಾಯಿತು ಹಾಕಬೇಕಾಯಿತುಆರಂಭಿಸಲಾಯಿತು. ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.ಮೊದಲು ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ.ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಘೋಷಿಸಲಾಗುವುದು.
ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದಾರೆ.