ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಘೋಷಿಸಲಾಗಿದೆ.ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಅಭ್ಯರ್ಥಿಯಾಗಿ
ಘೋಷಿಸಿದೆ ಎಂದು ತಿಳಿದು ಬಂದಿದೆ.ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಅ.21ರಂದು ಚುನಾವಣೆ ನಡೆಯಲಿದೆ.ಬಿಜೆಪಿ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಪುತ್ತೂರು ತಾಲೂಕಿನವರು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಸ್ಥಾನಕ್ಕೆ ಅವರ ಹೆಸರು ಕೇಳಿ ಬಂದಿತ್ತು.
ಚುನಾವಣೆಗೆ ಅಕ್ಟೋಬರ್ 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಕ್ಟೋಬರ್ 21ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ.