ಮಂಗಳೂರು:ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡಿದ್ದು, ಒಟ್ಟು 8 ನಾಮಪತ್ರಗಳು ಸಲ್ಲಿಕೆಯಾಗಿವೆ. ಗುರುವಾರ 7 ನಾಮಪತ್ರ ಸಲ್ಲಿಕೆಯಾಗಿದ್ದು, ಚುನಾವಣಾಧಿಕಾರಿಯಾಗಿರುವ
ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ನಾಮಪತ್ರವನ್ನು ಸ್ವೀಕರಿಸಿದರು.
ಗುರುವಾರ ನಾಮಪತ್ರ ಸಲ್ಲಿಸಿದವರ ವಿವರ :-
ಕಿಶೋರ್ ಬಿ.ಆರ್ (ಭಾರತೀಯ ಜನತಾ ಪಾರ್ಟಿ) 2 ನಾಮಪತ್ರ
ರಾಜು ಪೂಜಾರಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್) 3 ನಾಮಪತ್ರ
ಅನ್ವರ್ ಸಾದತ್.ಎಸ್ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ)
ಮುಹಮ್ಮದ್ ರಿಯಾಝ್ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಗುರುವಾರ ನಾಮಪತ್ರ ಸಲ್ಲಿಸಿದರು.ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ್ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದರು.