ಸುಳ್ಯ:ಅ.21ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು ಈ ಸಂದರ್ಭ ಕಟ್ಟು ನಿಟ್ಟಿನ ನಿಯಮ ಪಾಲನೆಗೆ ಇಲಾಖೆ ಸೂಚನೆ ನೀಡಿದ್ದು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಮತಗಟ್ಟೆಯ ನೂರು ಮೀಟರ್ ವ್ಯಾಪ್ತಿಯಲ್ಲಿ ಯಾವುದೇ
ವಾಹನ ಚಾಲನೆ ನಡೆಸುವಂತಿಲ್ಲ.
ಮತಗಟ್ಟೆಯ ನೂರು ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಚಟುವಟಿಗಳನ್ನು ನಡೆಸುವಂತಿಲ್ಲ .
ಮತಗಟ್ಟೆಯ ಒಳಗೆ ಪ್ರವೇಶಿಸುವ ಯಾವುದೇ ವ್ಯಕ್ತಿಯು ತಮ್ಮೊಂದಿಗೆ ಇಲೆಕ್ಟ್ರಾನಿಕ್ ಉಪಕರಣಗಳನ್ನು ಮೊಬೈಲ್, ಪೆನ್, ಪೆನ್ಸಿಲ್ ಇತ್ಯಾದಿ ಉಪಕರಣಗಳನ್ನು ತೆಗೆದುಕೊಂಡು ಹೋಗುವಂತಿಲ್ಲ.
ಚುನಾವಣೆಯ ಸಂಬಂಧ ಚುನಾವಣಾ ಆಯೋಗ ಹೊರಡಿಸಿರುವ ಯಾವುದೇ ಸುತ್ತೋಲೆ / ನಿರ್ದೇಶನಗಳನ್ನು ಉಲ್ಲಂಘಿಸುವಂತಿಲ್ಲ.
ಮತಗಟ್ಟೆಯಲ್ಲಿ ಅಧ್ಯಕ್ಷಾಧಿಕಾರಿಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು
ಮತದಾನದ ಗೌಪ್ಯತೆ ಕಾಪಾಡುವ ಮೂಲಕ ಶಾಂತಿಯುತ, ಶಿಸ್ತುಬದ್ಧ ಚುನಾವಣೆಗೆ ಎಲ್ಲರೂ ಸಹಕರಿಸಬೇಕೆಂದು ಸುಳ್ಯ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.