ಮೈಸೂರು: ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಇಲ್ಲಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮುಂದುವರಿದಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಧನಂಜಯ ಸರ್ಜಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮತ ಎಣಿಕೆಯ 3ನೇ ಸುತ್ತಿನ
ಮುಕ್ತಾಯದ ವೇಳೆಗೆ ಅವರು 22,655 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 8,238 ಮತಗಳನ್ನು ಗಳಿಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ರಘುಪತಿ ಭಟ್ 5,833 ಮತಗಳನ್ನು ತೆಗೆದುಕೊಂಡಿದ್ದಾರೆ. ಎಸ್.ಪಿ. ದಿನೇಶ್ 1,285 ಮತಗಳನ್ನು ಪಡೆದಿದ್ದಾರೆ.3ನೇ ಸುತ್ತಿನವರೆಗೆ 42ಸಾವಿರ ಮತಗಳ ಎಣಿಕೆ ಪ್ರಕ್ರಿಯೆ ಮುಗಿದಿದೆ. 3,147 ಮತಗಳು ತಿರಸ್ಕೃತಗೊಂಡಿವೆ.