ಸುಳ್ಯ: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯ ಮತದಾನ ಅ.21ರಂದು ನಡೆಯುದೆ. ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾರರಾಗಿರುವ ಚುನಾವಣೆಯ ಮತದಾನ ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡಿದ್ದು 4 ಗಂಟೆಯ ತನಕ ಮತದಾನ ನಡೆಯಲಿದೆ.10 ಗಂಟೆಯ ತನಕ 71 ಪುರುಷರು ಹಾಗೂ
77 ಮಹಿಳೆಯರು ಸೇರಿ 148 ಮಂದಿ ಮತದಾನ ಮಾಡಿದ್ದು ಶೇ.49.33 ಮತದಾನವಾಗಿದೆ.ಸುಳ್ಯ ತಾಲೂಕಿನಲ್ಲಿ ಒಟ್ಟು 26 ಮತಗಟ್ಟೆಗಳಿವೆ. ತಾಲೂಕಿನ 25 ಗ್ರಾಮ ಪಂಚಾಯತ್ಗಳಲ್ಲಿ ಮತ್ತು ಸುಳ್ಯ ನಗರ ಪಂಚಾಯತ್ನಲ್ಲಿ ಮತಗಟ್ಟೆ ಇರಲಿದೆ. ಸ್ಥಳೀಯ ಸಂಸ್ಥೆಗಳ ಸದಸ್ಯರು ಹಾಗೂ ಶಾಸಕರು ಸೇರಿ ಒಟ್ಟು 300 ಮತದಾರರು ಇದ್ದಾರೆ. 279 ಗ್ರಾಮ ಪಂಚಾಯತ್ ಸದಸ್ಯರು, 20 ನಗರ ಪಂಚಾಯತ್ ಸದಸ್ಯರು ಹಾಗೂ ಶಾಸಕರು ಈ ಚುನಾವಣೆಯಲ್ಲಿ ಮತದಾರರಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಸಂಸಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ನಡೆಯುತಿದೆ. ಬಿಜೆಪಿ ಅಧ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಒಟ್ಟು ನಾಲ್ಕು ಮಂದಿ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.
ಅಜ್ಜಾವರ ಮತದಾನ:
ಅಜ್ಜಾವರ ಗ್ರಾಮ ಪಂಚಾಯತ್ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿಂದ ವಿಧಾನ ಪರಿಷತ್ ಚುನಾವಣೆಗೆ ಮತದಾನ ಮಾಡಿದರು. ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾದ ರವಿರಾಜ ಕರ್ಲಪ್ಪಾಡಿ, ಸತ್ಯವತಿ ಬಸವನಪಾದೆ, ದಿವ್ಯಾ ಪಡ್ಡಂಬೈಲು, ಸರೋಜಿನಿ ಕರಿಯಮೂಲೆ, ರತ್ನಾವತಿ ಹನಿಯಡ್ಕಮತ ಚಲಾಯಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಕೋಶಾಧಿಕಾರಿ ಸುಬೋಧ್ ಶೆಟ್ಟಿ ಮೇನಾಲ, ಅಜ್ಜಾವರ ಶಕ್ತಿ ಕೇಂದ್ರ ಪ್ರಮುಖರಾದ ರಾಜೇಶ್ ಮೇನಾಲ, ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷ ವಿಕ್ರಂ ಅಡ್ಪಂಗಾಯ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಸಿಎ ಬ್ಯಾಂಕ್ ನಿರ್ದೇಶಕ ಪ್ರಬೋದ್ ಶೆಟ್ಟಿ, ಚಿದಾನಂದ ಇರಂತಮಜಲು ಮತ್ತಿತರರು ಪಂಚಾಯತ್ ಬಳಿಗೆ ಆಗಮಿಸಿದ್ದರು.