ಸುಳ್ಯ: ಆರ್ಯಭಟ ಪ್ರಶಸ್ತಿ ಪುರಸ್ಕೃತ ಬೃಂದಾವನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಯವರನ್ನು ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ವತಿಯಿಂದ ಆಯೋಜಿಸಿದ ಕಲಾ ರತ್ನ
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಉಪನ್ಯಾಸಕಿ ವತ್ಸಲರಾಜಿ ಸನ್ಮಾನಿಸಿದರು. ಶಿವಳ್ಳಿ ಸಂಪನ್ನದ ಅಧ್ಯಕ್ಷ ಪ್ರವೀಣ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಕಲಾ ರತ್ನ ಪ್ರಶಸ್ತಿ ಪುರಸ್ಕೃತ ಅಬತರ ಖ್ಯಾತಿಯ ನಟಿ ಗಾನ ಭಟ್ , ಮಂಗಳೂರು ವಿಶ್ವವಿದ್ಯಾನಿಲಯದ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಸುಭಾಷಿಣಿ , ಶಿವಳ್ಳಿ ಸಂಪನ್ನದ ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ಮೂಡಿತ್ತಾಯ ಮತ್ತಿತರರು ಉಪಸ್ಥಿತರಿದ್ದರು.