ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾದ ಮೋಚಾ ಚಂಡಮಾರುತ ಪರಿಣಾಮದಿಂದ ರಾಜ್ಯದ ವಿವಿಧೆಡೆ ಮಳೆಯಾಗಿದೆ.
ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ
ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಗುಡುಗು, ಮಿಂಚಿನ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯಾದ್ಯಂತ ಮೂರು ದಿನಗಳು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರ ಮಳೆಯಾಗುವ ಸಾಧ್ಯತೆ ಇದೆ. ಬೆಳಗ್ಗೆ ಸಮಯ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಹೊತ್ತಿಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಇದೆ.